ಯುವ ಜನರು ಮತದಾರರ ಪಟ್ಟಿಯಲ್ಲಿ – ಕಡ್ಡಾಯವಾಗಿ ನೋಂದಾಯಿಸಿ ಕೊಳ್ಳಿರಿ.

ಸಿರವಾರ ಸೆ.21

ವರ್ಷ ತುಂಬಿದ ಯುವ ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿ ಕೊಳ್ಳಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹನುಮಂತ ಕೊರಾಪುರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ ಹಾಗೂ ತಾ.ಪಂ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ಐಇಸಿ ಸಂಯೋಜಕ ರಾಜೇಂದ್ರ ಮಾತನಾಡಿ, 18 ವರ್ಷ ಮೇಲ್ಪಟ್ಟವರು ಮತದಾನದ ಹಕ್ಕು ಪಡೆಯಲು ಫಾರಂ ಜೊತೆಗೆ ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಇತ್ತೀಚಿನ ಭಾವಚಿತ್ರ ಮತ್ತು ತಂದೆ-ತಾಯಿ ಅಥವಾ ಅಜ್ಜ-ಅಜ್ಜಿಯ ಗುರುತಿನ ಚೀಟಿ ಲಗತ್ತಿಸಿ ನೀಡಬೇಕು. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೇರವಾಗಿಯೂ ಅರ್ಜಿ ಸಲ್ಲಿಸಬಹುದು’ ಎಂದರು. ಸಹಾಯಕ ಪ್ರಾಧ್ಯಾಪಕರಾದ ಪದ್ಮಾವತಿ, ಎಂ.ರಾಜಶೇಖರ, ಲಕ್ಷಣ ಯಾದವ್ ಮತ್ತು ಪ್ರವೀಣ, ಮುತ್ತಪ್ಪ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button