ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ – ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಹೊಸಪೇಟೆ ಸೆ.24

ಮೊನ್ನೆ ದಿನಾಂಕ 22 ರಂದು ಹೊಸಪೇಟೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಶೇಷ ಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗಳ ಸಹಯೋಗದಲ್ಲಿ, ಅಕ್ಟೋಬರ್ ಒಂದರಂದು ಜಿಲ್ಲೆಯಲ್ಲಿ ನಡೆಯಲಿರುವ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಮತ್ತು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹೊಸಪೇಟೆಯ ನಗರಸಭಾ ಅಧ್ಯಕ್ಷರಾದ ರೂಪೇಶ್ ಕುಮಾರ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಗಂಗಪ್ಪ, ವಿಶೇಷ ಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ಅನುಪಮಾ, ವಿಜಯ ನಗರ ಜಿಲ್ಲಾ ಹಿರಿಯ ನಾಗರಿಕರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಎ.ಎಂ. ಬಸವರಾಜ್, ಶೇಖರ್ ಪಾಟೀಲ್ ಮತ್ತು ಪ್ರಮೀಳಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗರಿಮನ್ವಾರ್, ಹಿರಿಯ ನಾಗರಿಕರು ದೇಶದ ಆಸ್ತಿ. ಅವರು ದೇಶದ ಅಭಿವೃದ್ಧಿಗೆ ನೀಡುವ ಜೀವನ ಶೈಲಿಯನ್ನು ರೂಢಿಸಿ ಕೊಂಡು ಕಿರಿಯರಿಗೆ ಮಾರ್ಗದರ್ಶನ ನೀಡಬೇಕು ಎಂದರು.
ಜಪಾನ್ ದೇಶದಲ್ಲಿನ ಹಿರಿಯ ನಾಗರಿಕರು ಬಹಳ ಲವಲವಿಕೆ ಯಿಂದ ಜೀವನ ನಡೆಸುತ್ತಿದ್ದಾರೆ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ತಾವೆಲ್ಲ ಹಿರಿಯ ನಾಗರಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿ ಎಂದರು.

ನಗರ ಸಭಾ ಅಧ್ಯಕ್ಷರಾದ ರೂಪೇಶ್ ಕುಮಾರ್ ಮಾತನಾಡಿ, ನಂತರ ಇಲ್ಲಸಲ್ಲದ ಆಲೋಚನೆ ಮಾಡಿ ಮನೋವ್ಯಾಕುಲತೆ ಹೊಂದದೆ, ಸದಾ ಲವಲವಿಕೆಯಿಂದ ಚಟುವಟಿಕೆಯಿಂದ ಇರಿ ಎಂದು ಕಿವಿಮಾತು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗಂಗಪ್ಪ ಮಾತನಾಡಿ ಜಿಲ್ಲೆಯ ಎಲ್ಲ ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ನೀಡಿ ಅವರ ಕಷ್ಟಗಳಿಗೆ ಸ್ಪಂದಿಸಲು ಇಲಾಖೆ ಸದಾ ಶ್ರಮಿಸುತ್ತಿದೆ ಎಂದರು.
ವಿಜಯನಗರ ಜಿಲ್ಲಾ ಹಿರಿಯ ನಾಗರಿಕರ ಹಿತರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷರಾದ ಎ.ಎಂ. ಬಸವರಾಜ್ ಮಾತನಾಡಿ, ಹಿರಿಯ ನಾಗರಿಕರು, ತಮಗೆ ವಯಸ್ಸಾಗಿದೆ ಎಂದು ನಿರುತ್ಸಾಹದಿಂದ ಇರುವುದನ್ನು ಬಿಟ್ಟು,ಸದಾ ಚಟುವಟಿಕೆಯಿಂದ ಇದ್ದು, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, ತಮ್ಮ ಆರೋಗ್ಯ ಶೈಲಿಯನ್ನು ಬದಲಾವಣೆ ಮಾಡಿಕೊಂಡು, ಮಾನಸಿಕ ಹಾಗೂ ದೈಹಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವ ಮೂಲಕ ಸದಾ ಲವಲವಿಕೆ, ಚಟುವಟಿಕೆಯಿಂದ ತಮ್ಮಗಳ ಆರೋಗ್ಯ ಕಾಪಾಡಿ ಕೊಳ್ಳಬೇಕೆಂದರು.
ಹಿರಿಯ ನಾಗರಿಕರಾದ ಪ್ರಮೀಳಾ ಮಾತನಾಡಿ, ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯಾಗಿರುವ ನಾನು ಯೋಗ ಮೆಡಿಟೇಶನ್ ಗಳಂತ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸದಾ ಚಟುವಟಿಕೆಯಿಂದ ಇದ್ದೇನೆ ಎಂದರು.
ಹಿರಿಯ ನಾಗರಿಕರಿಗೆ ಅನೇಕ ಕ್ರೀಡೆಗಳನ್ನು ಏರ್ಪಡಿಸ, ಲಾಗಿತ್ತು ಬಕಿಟ್ ನಲ್ಲಿ ಬಾಲ್ ಹಾಕುವ ಸ್ಪರ್ಧೆಯಲ್ಲಿ ಬಶೀರ್ ಅಹ್ಮದ್ ಮೊದಲನೇ ಬಹುಮಾನ ಹಾಗೂ ಎ. ಎಂ ಬಸವರಾಜ್ ಎರಡನೇ ಬಹುಮಾನ ಪಡೆದರು. ಬಿರುಸಿನ ನಡುಗೆ, ಏಕಪಾತ್ರ ಅಭಿನಯ , ಹಾಗೂ ಇನ್ನಿತರ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನೂರಾರು ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು. ಊಟದ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಕಂಡ ಕೆಲವು ಹಿರಿಯ ನಾಗರಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರಾಘವೇಂದ್ರ ಬಿ ಸಾಲುಮನೆ ಕೂಡ್ಲಿಗಿ

