ಡಾ, ಸುನಿತಾ ಪಾಟೀಲ್‌ ಗೆ ಜಿಲ್ಲಾ ಮಟ್ಟದ – ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ.

ಕಲಬುರಗಿ ಸೆ.29

ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಸೆಂಟ್ ಮೇರಿ ಸಭಾ ಭವನದಲ್ಲಿ ಆಯೋಜಿಸಿದ್ದ ಸಂಗೀತ ಸಂಭ್ರಮ ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಡಾ, ಸುನಿತಾ ಪಾಟೀಲ್ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಷ. ಬ್ರ ಅಭಿನವ ಸಿದ್ದಲಿಂಗ ಶಿವಾಚಾರ್ಯರು ವಹಿಸಿ ಕೊಂಡಿದ್ದರು.

ಅಧ್ಯಕ್ಷತೆ ಬಿ.ಎಚ್ ನಿರಗುಡಿ ಕಲಬುರ್ಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಅಧ್ಯಕ್ಷರು ವಹಿಸಿದರು ಈ ಸಂದರ್ಭದಲ್ಲಿ ಇನ್ನೂ ಅನೇಕ ಉಪನ್ಯಾಸಕರು, ಶಿಕ್ಷಕರು, ಗಣ್ಯರು, ವಿದ್ಯಾರ್ಥಿಗಳು ಹಾಗೂ ಸಂಗೀತಾಸ್ತಕರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button