ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ – ಡಾ, ಸುನಿತಾ ಪಾಟೀಲ ಅವರಿಗೆ ಸನ್ಮಾನ.
ಕಲಬುರಗಿ ಸೆ.29


ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆ ಹಾಗೂ ಅತ್ಯುತ್ತಮ ಬೋಧನಾ ಕಾರ್ಯಕ್ಕಾಗಿ ‘ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’ ಪಡೆದಿರುವ ಡಾ, ಸುನಿತಾ ಪಾಟೀಲ್ ಅವರನ್ನು ವಿಶ್ವವಿದ್ಯಾಲಯದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ನಗರದ ಶರಣಬಸವ ವಿಶ್ವವಿದ್ಯಾಲಯದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸುನಿತಾ ಪಾಟೀಲ್ ಅವರಿಗೆ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.
ಡಾ, ಸುನಿತಾ ಪಾಟೀಲ್ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಜ್ಞಾನ, ಬೋಧನಾ ಕೌಶಲ್ಯ ಹಾಗೂ ಸಮರ್ಪಣಾ ಮನೋಭಾವದ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಶಿಕ್ಷಕರಾಗಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಜ್ಞಾನ, ಮೌಲ್ಯಗಳು ಮತ್ತು ಆತ್ಮ ವಿಶ್ವಾಸ ಬೆಳೆಸುವಲ್ಲಿ ಅವರು ವಹಿಸಿರುವ ಪಾತ್ರವನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಲಾಯಿತು.
ಈ ಸಂದರ್ಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಡಿನ್ ಪ್ರೊ, ಟಿ ವಿ ಶಿವಾನಂದ, ಉಪನ್ಯಾಸಕರಾದ ಅನಿತಾ ಮೇಡಂ, ಅಮರ ಸರ್, ಕೀರ್ತಿ ಮೇಡಂ ಸೇರಿದಂತೆ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
