ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಿ – ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ.

ಚಿಕ್ಕಮಗಳೂರು ಸೆ.30

ಜಿಲ್ಲೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರನ್ನು ನೇಮಕಾತಿ ಮಾಡಬೇಕೆಂದು ಮ್ಯಾನುಯೆಲ್ ಸ್ಕಾವೆಂಜರ್ಸ್ ಮತ್ತು ಸಪಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾದ ತರೀಕೆರೆ ಎನ್ ವೆಂಕಟೇಶ್ ರವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ರವರು ಮಾತನಾಡಿ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಹೇಳಿದರು.

ಪೌರ ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಪಾಯಿ ಕರ್ಮಚಾರಿಗಳಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಿರಿ ಎಂದು ಅಧಿಕಾರಿಗಳಿಗೆ ಸೂಚನೆ ಮಾಡಿದರು. ನಿಧನರಾದ ಪೌರಕಾರ್ಮಿಕರ ಕುಟುಂಬದವರಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿ ಮಾಡಬೇಕೆಂದು ಸಮಿತಿ ಸದಸ್ಯ ತರೀಕೆರೆ ಎನ್ ವೆಂಕಟೇಶ್ ಮನವಿ ಮಾಡಿದರು.

ಈ ಕುರಿತು ಜಿಲ್ಲಾಧಿಕಾರಿಗಳು ಅರ್ಜಿಯನ್ನು ಸಲ್ಲಿಸಲು ತಿಳಿಸಿದರು,ಸಮಿತಿ ಸದಸ್ಯರಾದ ಕೆ ಟಿ ರಾಧಾಕೃಷ್ಣ ಮಾತನಾಡಿ ಗುತ್ತಿಗೆ ಸಪಾಯಿ ಕರ್ಮಚಾರಿಗಳಿಗೆ ಪಿಎಫ್ ಮತ್ತು ಇಎಸ್ಐ ಸೌಲಭ್ಯವನ್ನು ಕೊಡಿಸಬೇಕು, ಈ ಕುರಿತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ತಿಳಿಸಿದರು. ಸಮಿತಿ ಸದಸ್ಯರಾದ ಶೀಲಾ ಮಾತನಾಡಿ ಕಳೆದ ಸಭೆಯಲ್ಲಿ ಸಮಿತಿ ಸದಸ್ಯರಾದ ಎಂ.ವಿ ಭವಾನಿ ರವರು ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಗುತ್ತಿಗೆ ಪೌರ ಕಾರ್ಮಿಕರಿಗೆ ಮೂರು ತಿಂಗಳು ಕೆಲಸ ಮಾಡಿಸಿ ಕೊಂಡು ವೇತನ ನೀಡಿಲ್ಲವೆಂದು ದೂರಿದರು ಈ ಕುರಿತು ಶೀಲರವರು ಪ್ರಸ್ತಾಪಿಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ವೇತನ ಮಂಜೂರು ಮಾಡಿಸಿ ಕೊಡಬೇಕು ಎಂದು ತಿಳಿಸಿದ ಮೇರೆಗೆ ಜಿಲ್ಲಾಧಿಕಾರಿಗಳು ಮುಖ್ಯ ಅಧಿಕಾರಿಗಳಿಗೆ ವೇತನ ಪಾವತಿಸಲು ಆದೇಶಿಸಿದರು.

ತರೀಕೆರೆ ಎನ್ ವೆಂಕಟೇಶ್ ರವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿ ಪೌರ ಕಾರ್ಮಿಕರು ವಾಸ ಮಾಡುತ್ತಿರುವ ಕ್ವಾಟ್ರಸ್ ಗಳನ್ನು ಅವರ ಹೆಸರಿಗೆ ಮಂಜೂರು ಮಾಡಿ ಹಕ್ಕುಪತ್ರ ಕೊಡಬೇಕು, ಜಿಲ್ಲೆಯಾದ್ಯಂತ ಪೌರ ಕಾರ್ಮಿಕರಿಗೆ ಮನೆ ನಿವೇಶನಗಳನ್ನು ಮಂಜೂರಿ ಮಾಡಿ ಕೊಡಬೇಕು,ಆಸ್ಪತ್ರೆ ಸಪಾಯಿ ಕರ್ಮಚಾರಿಗಳನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು, ನೇರ ಪಾವತಿಯಲ್ಲಿ ಸೇವೆ ಸಲ್ಲಿಸುತ್ತಾ ನಿಧನರಾದ ಚಿಕ್ಕಮಗಳೂರಿನ ಜಗದೀಶ್, ತರೀಕೆರೆ ರಂಗನಾಥ್ ರವರ ಕುಟುಂಬದವರಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿ ಮಾಡಿ ಕೊಳ್ಳಬೇಕೆಂದು ಮನವಿ ಪತ್ರ ನೀಡಿದರು. ಈ ಕುರಿತು ಕ್ರಮ ತೆಗೆದು ಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ದ ಯೋಜನಾ ನಿರ್ದೇಶಕರು ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯತಿಯ, ಮುಖ್ಯ ಅಧಿಕಾರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾ ಸರ್ಜನ್ ದೇವರಾಜ್ ರವರು ಉಪಸ್ಥಿತರಿದ್ದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಮಾಲತಿರವರು ಸ್ವಾಗತಿಸಿ ವಂದಿಸಿದರು.

ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್ ವೆಂಕಟೇಶ್ ತರೀಕೆರೆ ಚಿಕ್ಕಮಗಳೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button