ವಾಲ್ಮೀಕಿ ನಾಯಕ ಮಹಾಸಭಾ ತಾಲೂಕ ಅಧ್ಯಕ್ಷರಾಗಿ – ರಮೇಶ ನಾಯಕ ಕಪಗಲ್ ಆಯ್ಕೆ.
ಮಾನ್ವಿ ಅ.01


ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ.) ರಾಯಚೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಮಾನ್ವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ.)ಯ ಮಾನ್ವಿ ತಾಲೂಕು ನೂತನ ಅಧ್ಯಕ್ಷರಾಗಿ ರಮೇಶ ನಾಯಕ ಕಪಗಲ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಮಹಾಂತೇಶ ನಾಯಕ ತಡಕಲ್ ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ನೇಮಕ ಮಾಡಲಾಯಿತು.
ಪಟ್ಟಣದ ಬೆಟ್ಟದಗವಿ ಶ್ರೀ ಅನ್ನಮಯ್ಯ ತಾತನವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಸಭೆಯ ಜಿಲ್ಲಾಧ್ಯಕ್ಷ ಹನುಮೇಶ ನಾಯಕ ಸಾದಾಪುರ, ರಾಮಣ್ಣ ನಾಯಕ, ಅಮರೇಶ ನಾಯಕ ಜಾನೇಕಲ್, ಮ್ಯಾಕಲ್ ಅಯ್ಯಪ್ಪ ನಾಯಕ, ಬುಡ್ಡಪ್ಪ ನಾಯಕ ಸೇರಿದಂತೆ ಸಮಾಜದ ಹಿರಿಯ ಮುಖಂಡರು, ಗಣ್ಯರು ಹಾಗೂ ತಾಲೂಕು ವ್ಯಾಪ್ತಿಯ ಸಮಾಜ ಬಾಂಧವರು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಹಿರಿಯರು, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಸಮಾಜದ ಒಗ್ಗಟ್ಟು, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಆದ್ಯತೆ ನೀಡುವುದು, ಯುವಕರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಹಾಗೂ ಸಮಾಜದ ಹಕ್ಕುಗಳಿಗಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ನೂತನ ತಾಲೂಕ ಅಧ್ಯಕ್ಷ ರಮೇಶ ನಾಯಕ ಕಪಗಲ್ ಮಾತನಾಡಿ, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಜಿಲ್ಲಾ ಘಟಕದ ಪದಾಧಿಕಾರಿಗಳು, ಸಮಾಜದ ಹಿರಿಯರು ಹಾಗೂ ಸಮಾಜ ಬಾಂಧವರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಸಹಕಾರ ಮತ್ತು ಮಾರ್ಗ ದರ್ಶನದೊಂದಿಗೆ ವಾಲ್ಮೀಕಿ ನಾಯಕ ಸಮಾಜದ ಏಳಿಗೆ ಹಾಗೂ ಸಂಘಟನೆಯ ಬಲ ವರ್ಧನೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಹಿರಿಯರು, ಮುಂದಿನ ದಿನಗಳಲ್ಲಿ ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.
ನೂತನ ಪದಾಧಿಕಾರಿಗಳ ಆಯ್ಕೆಯ ಮೂಲಕ ಸಮಾಜದ ಒಗ್ಗಟ್ಟು ಹಾಗೂ ಸಂಘಟನೆಯ ಬಲ ವರ್ಧನೆಗೆ ಹೊಸ ಹೆಜ್ಜೆ ಇಡಲಾಗಿದೆ ಎಂದು ಸಮಾಜ ಬಾಂಧವರು ಹರ್ಷ ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

