ಬರಗಾಲದ ನಡುವೆ ರೈತರಿಗೆ ವಿದ್ಯುತ್‌ ಸಂಕಷ್ಟ – 10 ತಾಸು ಪೂರೈಕೆಗೆ ಆಗ್ರಹ.

ಮಾನ್ವಿ ಅ.04

ತಾಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ರೈತರು ತಮ್ಮ ಬೆಳೆಗಳನ್ನು ಉಳಿಸಿ ಕೊಳ್ಳಲು ನದಿ ನೀರು ಹಾಗೂ ಕೊಳವೆ ಬಾವಿಗಳನ್ನು ಅವಲಂಬಿಸಿದ್ದಾರೆ. ಆದರೆ ಜೆಸ್ಕಾಂ ಇಲಾಖೆಯಿಂದ ಕೃಷಿ ಪಂಪ್‌ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಯಾಗದ ಕಾರಣ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಶಾಸಕ ಗಂಗಾಧರ ನಾಯಕ ಹೇಳಿದರು.

ಪಟ್ಟಣದ ಜೆಸ್ಕಾಂ ಇಲಾಖೆಯ ಕಚೇರಿ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಮಾನ್ವಿ ಮಂಡಲ ವತಿಯಿಂದ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವೈಜಾನಾಥ ಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ನದಿ ಪಾತ್ರದ ರೈತರ ಕೃಷಿ ಪಂಪ್‌ ಸೆಟ್‌ಗಳಿಗೆ ಕನಿಷ್ಠ 10 ಗಂಟೆಗಳ ಕಾಲ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಸ ಬೇಕು. ಅಗತ್ಯವಿರುವ ಕಡೆ ಐ.ಪಿ ಲೈನ್‌ಗಳ ವಿಸ್ತರಣೆ ಹಾಗೂ ಹೊಸ ಐ.ಪಿ ಲೈನ್‌ಗಳ ನಿರ್ಮಾಣ ಮಾಡಬೇಕು. ವಿದ್ಯುತ್ ಸಂಪರ್ಕ ಸಮರ್ಪಕವಾಗಿ ಇಲ್ಲದ ಕೃಷಿ ಜಮೀನುಗಳಿಗೆ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹೊಸ ವಿದ್ಯುತ್ ಸಂಪರ್ಕಕ್ಕಾಗಿ ರೈತರು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಆದ್ಯತೆಯ ಮೇರೆಗೆ ಸಂಪರ್ಕ ಕಲ್ಪಿಸಬೇಕು. ಬಾಕಿ ಇರುವ ವಿದ್ಯುತ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣ ಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಾನ್ವಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಪ್ರಧಾನ ಕಾರ್ಯದರ್ಶಿಗಳಾದ ಗುರುಸಿದ್ದಪ್ಪ ಕಣ್ಣೂರು, ಹನುಮೇಶ ನಾಯಕ, ಶರಣಪ್ಪಗೌಡ ನಕ್ಕುಂದಿ, ಉಮೇಶ ಸಜ್ಜನ, ಜೆ. ಸುಧಾಕರ, ಕೆ. ನಾಗಲಿಂಗಸ್ವಾಮಿ, ಮಲ್ಲಿಕಾರ್ಜುನಗೌಡ ಸಂಗಾಪುರ, ರುದ್ರಗೌಡ ಮದ್ಲಾಪುರ, ವಿರೂಪಾಕ್ಷಿಗೌಡ ನುಗಡೋಣಿ, ವೀರನಗೌಡ ವಕೀಲರು, ಜಗದೀಶ ಓತೂರು, ರವಿಕುಮಾರ ಆಲ್ದಾಳ, ಶಿವಲಿಂಗಯ್ಯ ಸ್ವಾಮಿ, ಕುಮಾರಸ್ವಾಮಿ ಮೇದಾರ, ಅಮರೇಶ ನಾಯಕ ಜಾನೆಕಲ್ ಸೇರಿದಂತೆ ತಾಲೂಕಿನ ರೈತರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button