ಶಾರದಾ ಕಾಲೇಜಿನಲ್ಲಿ ಒಂದು ದಿನದ – ಯೋಗ ಶಿಬಿರ ಆಯೋಜನೆ.

ಮಾನ್ವಿ ಅ.04

ಶಾರದಾ ಕಾಲೇಜಿನ ಬಿ.ಎಡ್. ಪ್ರಥಮ ವರ್ಷದ ಶಿಕ್ಷಣಾರ್ಥಿಗಳಿಗಾಗಿ ಯೋಗ ಗುರು ಅನ್ನದಾನಯ್ಯ ಅವರ ನೇತೃತ್ವದಲ್ಲಿ ಒಂದು ದಿನದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.

ಬೆಳಿಗ್ಗೆ 7 ರಿಂದ 11 ಗಂಟೆಯ ವರೆಗೆ ನಡೆದ ಶಿಬಿರದಲ್ಲಿ ಶಿಕ್ಷಣಾರ್ಥಿಗಳಿಗೆ ಮೊದಲಿಗೆ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು.

ನಂತರ ಯೋಗ ಎಂದರೇನು, ಯೋಗದ ವಿವಿಧ ಹಂತಗಳು, ಯೋಗಾ ಭ್ಯಾಸಕ್ಕೆ ಸೂಕ್ತವಾದ ಸಮಯ, ಸಾತ್ವಿಕ ಆಹಾರ, ಧ್ಯಾನ ಸೇರಿದಂತೆ ಹಲವು ವಿಷಯಗಳ ಕುರಿತು ವೈಜ್ಞಾನಿಕ ಮಾಹಿತಿಯನ್ನು ನೀಡಲಾಯಿತು

‘ಚಿತ್ತ ವೃತ್ತಿ ನಿರೋಧಃ’ ಎಂಬ ಯೋಗದ ವ್ಯಾಖ್ಯಾನದ ಅರ್ಥ ಹಾಗೂ ಮಹತ್ವವನ್ನು ವಿವರಿಸಿದ ಯೋಗ ಗುರು ಅನ್ನದಾನಯ್ಯ ಅವರು ಅಷ್ಟಾಂಗ ಯೋಗದ ಕುರಿತು ವಿಶೇಷ ಮಾಹಿತಿಯನ್ನು ನೀಡಿದರು.

ಶಿಕ್ಷಣಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಯೋಗಾ ಭ್ಯಾಸಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಿಳಿಸಿ ಕೊಟ್ಟರು.

ಇದೇ ಸಂದರ್ಭದಲ್ಲಿ ಸಾತ್ವಿಕ, ರಾಜಸಿಕ ಹಾಗೂ ತಾಮಸಿಕ ಆಹಾರಗಳ ಗುಣಲಕ್ಷಣಗಳು ಮತ್ತು ಅವುಗಳ ಮಹತ್ವದ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು.

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಗಾಗಿ ಧ್ಯಾನ ಮತ್ತು ನಿಯಮಿತ ಯೋಗಾ ಭ್ಯಾಸದ ಅಗತ್ಯವನ್ನು ತಿಳಿಸಲಾಯಿತು.

ಶಿಬಿರದ ಸಮಾರೋಪ ಸಮಾರಂಭದ ಆರಂಭದಲ್ಲಿ ಲಲಿತಾ ಅವರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಪೀರ್ ಮಹಮದ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ಯೋಗ ಶಿಬಿರದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪ ಪ್ರಾಚಾರ್ಯ ವೀರಭದ್ರಯ್ಯ ಹಿರೇಮಠ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಹೇಳಿದರು.

ಉಪನ್ಯಾಸಕ ಆನಂದ್ ಮಾತನಾಡಿ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸನ್ನು ಹೊಂದಲು ಯೋಗಾಭ್ಯಾಸ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪರಮೇಶ್ವರಪ್ಪ ಗೋಪಶೆಟ್ಟಿ ಮಾತನಾಡಿ, ಯೋಗವು ವೈಜ್ಞಾನಿಕವಾದ ಅಭ್ಯಾಸವಾಗಿದ್ದು, ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹಾಗೂ ಹಲವು ರೋಗಗಳನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.

ಕೊನೆಯಲ್ಲಿ ಯೋಗ ಗುರು ಅನ್ನದಾನಯ್ಯ ಅವರನ್ನು ಸನ್ಮಾನಿಸಲಾಯಿತು. ಬಿ.ಎಡ್. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button