ಶಾಸಕರ ಸಮ್ಮುಖದಲ್ಲಿ ಅಕ್ಟೋಬರ್ 4 ರಂದು ಮೊಳಕಾಲ್ಮೂರು ಪದವೀಧರ ಕ್ಷೇತ್ರ ವಿಧಾನ ಪರಿಷತ್ – ಚುನಾವಣೆ ಸಮಾವೇಶ ನಡೆಸಲಾಯಿತು.
ಮೊಳಕಾಲ್ಮುರು ಅ.04


ಇಂದು ರಾಂಪುರ ತೋಟದ ನಿವಾಸದಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ನಮ್ಮ ಶಾಸಕರಾದ ಶ್ರೀ ಎನ್. ವೈ. ಗೋಪಾಲಕೃಷ್ಣ ಅವರು ಭಾಗವಹಿಸಿ, ಪದವೀಧರ ಮತದಾರರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಪ್ರಮುಖರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಶ್ರೀ ಶಶಿ ಹುಲಿಕುಂಟೆ ಮಠ ಅವರ ಪರವಾಗಿ ಪ್ರಚಾರ ನಡೆಸಿ, ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ ಬೆಂಬಲಿಸುವಂತೆ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪದವೀಧರ ಮತದಾರರು, ಕಾಂಗ್ರೆಸ್ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೇರಿ ಹೊಂಬಾಳೆ ಮೊಳಕಾಲ್ಮುರು
