ಶಾರದಾ ಮಾತೆಯವರು ತಮ್ಮ ದೇವಿತ್ವವನ್ನು ಪ್ರಕಟ ಪಡಿಸುತ್ತಿದ್ದರು – ಮಾತಾಜೀ ತ್ಯಾಗಮಯೀ.

ಚಳ್ಳಕೆರೆ ಅ.11

ಶ್ರೀಮಾತೆ ಶಾರದಾದೇವಿಯವರು ತಮ್ಮ ಶಿಷ್ಯರು ಮತ್ತು ಭಕ್ತರ ಮುಂದೆ ತಮ್ಮ ದೇವಿತ್ವವನ್ನು ಪ್ರಕಟಪಡಿಸುತ್ತಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ತಿಳಿಸಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು “ಶ್ರೀಮಾತೆ ಶಾರದಾದೇವಿಯವರ ತೀರ್ಥಯಾತ್ರೆಗಳ” ಬಗ್ಗೆ ವಿಶೇಷ ಪ್ರವಚನ ನೀಡಿದರು.

ಸತ್ಸಂಗದ ಪ್ರಯುಕ್ತ ಸದ್ಭಕ್ತರಾದ ಶ್ರೀಮತಿ ವನಜಾಕ್ಷಿ ಮೋಹನ್ ಅವರಿಂದ ವಿಶೇಷ ಭಜನೆ, ದಿವ್ಯತ್ರಯರಿಗೆ ಆರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಎಂ ಗೀತಾ ನಾಗರಾಜ್, ಜಿ ಯಶೋಧಾ ಪ್ರಕಾಶ್, ಯತೀಶ್ ಎಂ ಸಿದ್ದಾಪುರ, ಪಂಕಜಾ, ಮಂಜುಳಾ,ಸಿ.ಎಸ್ ಭಾರತಿ, ಸಂಧ್ಯಾ ಸುಧಾಕರ್, ಶ್ರೀಪಾದ್, ಚೇತನ್, ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button