ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ – ಮಲ್ಲು ವಜ್ಜಲ್‌ಗೆ ಗಂಭೀರ ಗಾಯ.
ಹೊನ್ನಹಳ್ಳಿ ಅ.23




ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯ ಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ವಾಹನ ಜಖಂ ಗೊಂಡಿದ್ದು, ಸ್ಥಳೀಯರು ಗಾಯಾಳುವನ್ನು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಲ್ಲು ವಜ್ಜಲ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ
