ಗ್ರಾಮ ಪಂಚಾಯಿತಿಯಲ್ಲಿ ಮಹರ್ಷಿ – ವಾಲ್ಮೀಕಿ ಜಯಂತಿ ಆಚರಣೆ.

ದೇವಣಗಾಂವ ಅ.26

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೌರವ ಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಾಣಿಕ ಕಲಬಾ, ಗ್ರಾಮ ಪಂಚಾಯಿತಿ ಸದಸ್ಯರಾದ ದವಲಪ್ಪ ಸೊನ್ನ ಹಾಗೂ ನಿಂಗಪ್ಪ ಅಳ್ಳಗಿ, ಗ್ರಾಮದ ಹಿರಿಯರು, ಯುವಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದು, ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ಗೌರವ ಸಲ್ಲಿಸಿದರು.

ಮಹರ್ಷಿ ವಾಲ್ಮೀಕಿ ಅವರ ಸಂಕ್ಷಿಪ್ತ ಇತಿಹಾಸ:-

ಮಹರ್ಷಿ ವಾಲ್ಮೀಕಿ ಅವರು ಭಾರತೀಯ ಸಂಸ್ಕೃತಿಯ ಮಹಾನ್ ಋಷಿ ಹಾಗೂ ಆದಿಕವಿ ಎಂದು ಪ್ರಸಿದ್ಧರಾಗಿದ್ದಾರೆ. ಅವರು ಸಂಸ್ಕೃತದ ಮಹಾ ಕಾವ್ಯವಾದ ರಾಮಾಯಣವನ್ನು ರಚಿಸಿದ ಮಹರ್ಷಿ ಎಂದು ಗೌರವಿಸಲ್ಪಡುತ್ತಾರೆ. ರಾಮಾಯಣದ ಮೂಲಕ ಶ್ರೀರಾಮನ ಜೀವನ, ಸತ್ಯ, ಧರ್ಮ, ಕರ್ತವ್ಯ, ತ್ಯಾಗ ಮತ್ತು ಆದರ್ಶ ಬದುಕಿನ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿದರು.

ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶವು ಮನುಷ್ಯನ ವ್ಯಕ್ತಿತ್ವ ವಿಕಸನ, ಉತ್ತಮ ಚಿಂತನೆ ಮತ್ತು ಸನ್ಮಾರ್ಗದ ಬದುಕಿಗೆ ಪ್ರೇರಣೆ ನೀಡುತ್ತದೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಕೊಂಡು ಸಮಾಜದಲ್ಲಿ ಪ್ರೀತಿ, ಸಹೋದರತ್ವ ಮತ್ತು ಸಮಾನತೆಯನ್ನು ಬೆಳೆಸಬೇಕು ಎಂಬ ಸಂದೇಶವನ್ನು ಜಯಂತಿ ಸಾರುತ್ತದೆ.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅವರ ಸ್ಮರಣೆಗೆ ಗೌರವ ಸಲ್ಲಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button