ಸಮಾಜ ಸೇವೆ ಹಾಗೂ ಪತ್ರಿಕೋದ್ಯಮದ ಸೇವೆಯನ್ನು – ಗುರುತಿಸಿ ಪ್ರಶಸ್ತಿಗೆ ಆಯ್ಕೆ.

ಕಡಣಿ ಅ.28

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಬಸವರಾಜ್ ಶಿ. ಪಡಶೆಟ್ಟಿ ಅವರು ಪತ್ರಿಕೋದ್ಯಮ ಹಾಗೂ ಸಮಾಜ ಸೇವೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಕರ್ನಾಟಕ ಸಂಯುಕ್ತ ರಂಗ ಜಾಗೃತಿ ಟ್ರಸ್ಟ್, ತುಮಕೂರು ವತಿಯಿಂದ ನೀಡಲಾಗುವ ದಿವಂಗತ ಕೆಂಗಲ್ ಹನುಮಂತಯ್ಯ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಹಾಗೂ ಗೌರವ ಪುರಸ್ಕಾರಕ್ಕೆ ಆಯ್ಕೆ ಯಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಾಗೂ ವಿಧಾನ ಸೌಧ ನಿರ್ಮಾತೃ, ಕರ್ನಾಟಕ ಏಕೀಕರಣದ ಪ್ರಮುಖ ಪಾತ್ರಧಾರಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಜನ್ಮ ಜಯಂತಿ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ರ ನವೆಂಬರ್ 5 ರ ಗುರುವಾರ ಮಧ್ಯಾಹ್ನ 4 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಸಮೀಪದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಬಸವರಾಜ್.ಶಿ ಪಡಶೆಟ್ಟಿ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಲಾಕ್‌ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಅಂಗವಿಕಲರಿಗೆ ಆಹಾರ ಸಾಮಗ್ರಿಗಳನ್ನು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಅಣವೀರ ಭದ್ರೇಶ್ವರ ಜಾತ್ರೆಗೆ ಪಾದಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ತಮ್ಮ ಗೆಳೆಯರೊಂದಿಗೆ ಸೇರಿ ಕುಡಿಯುವ ನೀರು, ಹಣ್ಣುಗಳು ಹಾಗೂ ಅನ್ನ ಪ್ರಸಾದದ ವ್ಯವಸ್ಥೆ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದಾರೆ.

ಅವರ ಈ ಸೇವಾ ಕಾರ್ಯಗಳನ್ನು ಪರಿಗಣಿಸಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕಡಣಿ ಗ್ರಾಮ ಸೇರಿದಂತೆ ಆಲಮೇಲ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.

ಅಭಿನಂದನೆಗಳ ಮಹಾಪೂರ:-

ಪ್ರಶಸ್ತಿಗೆ ಆಯ್ಕೆ ಯಾಗಿರುವ ಬಸವರಾಜ್.ಶಿ ಪಡಶೆಟ್ಟಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಆಲಮೇಲ ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ಜನಮನ ಧ್ವನಿ ಸುದ್ದಿ ಕನ್ನಡ ನ್ಯೂಸ್‌ನ ವರದಿಗಾರರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button