🔴BREAKING NEWS🔴 🚨ಬ್ರೇಕಿಂಗ್ ನ್ಯೂಸ್🚨 💥ಸಂವಿಧಾನ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಬೃಹತ್ ಪ್ರತಿಭಟನೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರಿಂದ – ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!💥

ಉಡುಪಿ/ಸಾಲಿಗ್ರಾಮ ನ.05

ದೇಶದ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಮತದಾರರ ಮೂಲಭೂತ ಹಕ್ಕುಗಳನ್ನು ಕಸಿದು ಕೊಳ್ಳಲು ಹೊರಟಿರುವ ಜನ ವಿರೋಧಿ ಧೋರಣೆಗಳ ವಿರುದ್ಧ ಕಾಂಗ್ರೆಸ್ ಪಕ್ಷವು ತನ್ನ ಹೋರಾಟವನ್ನು ತೀವ್ರ ಗೊಳಿಸಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ರಾಜ್ಯಾದ್ಯಂತ ಬೃಹತ್ ಹೋರಾಟ ರೂಪಿಸುವುದಾಗಿ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಲಕ್ಷಾಂತರ ಜನಸ್ತೋಮ ಭಾಗವಹಿಸಿದ್ದರೂ, ಕೇಂದ್ರ ಸರ್ಕಾರವು ಉದ್ದೇಶ ಪೂರ್ವಕವಾಗಿ ಮೈದಾನಕ್ಕೆ ನೀರು ಹರಿಸಿ ಕೆಸರು ಮಾಡುವ ಮೂಲಕ ಪ್ರತಿಭಟನೆಯನ್ನು ಹತೋಟಿಗೆ ತರಲು ಯತ್ನಿಸಿದೆ ಎಂದು ಪಕ್ಷದ ವಕ್ತಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಲಕ್ಷಕ್ಕೂ ಅಧಿಕ ಜನರು ಸೇರಿದ್ದ ಈ ಐತಿಹಾಸಿಕ ಸಮಾವೇಶವನ್ನು ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ಬಿತ್ತರಿಸದೆ ಮೌನ ವಹಿಸಿವೆ; ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ಸತ್ಯವು ವೇಗವಾಗಿ ಜನರನ್ನು ತಲುಪುತ್ತಿದೆ ಎಂದು ತಿಳಿಸಲಾಗಿದೆ.

🚨 ಪ್ರಮುಖ ಮುಖ್ಯಾಂಶಗಳು:-

ರ್ಯಾಲಿಗೆ ಕಸರತ್ತು:-

ಬಿ.ವೈ ವಿಜಯೇಂದ್ರ ಮತ್ತು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷದ ಹೋರಾಟಗಳು ಮುಂದುವರಿಯಲಿದ್ದು, ಇದರ ಮುಂದುವರಿದ ಭಾಗವಾಗಿ ನಾಳೆ ಮಣಿಪಾಲದಲ್ಲಿ ಜಿಲ್ಲಾ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕುವ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

ಸ್ವಾತಂತ್ರ್ಯ ಹೋರಾಟದ ಮರು ರೂಪ:-

ಈ ಹೋರಾಟವು ಕೇವಲ ಒಂದು ಪಕ್ಷಕ್ಕೆ ಸೀಮಿತವಾಗಿರದೆ, ದೇಶವನ್ನು ಉಳಿಸುವ ಎರಡನೇ ಸ್ವಾತಂತ್ರ್ಯ ಹೋರಾಟದಂತಿದೆ. ಪ್ರತಿಯೊಬ್ಬ ನಾಗರಿಕರೂ ‘ವೋಟ್ ಚೋರಿ’ ಅಭಿಯಾನ ಮತ್ತು ಜಾಗೃತಿ ಪ್ರತಿಭಟನೆಯಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ.

📢 ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಎಚ್ಚರಿಕೆ:-

“ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯನ್ನು ನಾಶ ಮಾಡಲು ಕೆಲವರು ಹುನ್ನಾರ ನಡೆಸುತ್ತಿದ್ದಾರೆ. ಬಡವರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿದು ಕೊಳ್ಳುವ ಯಾವುದೇ ಷಡ್ಯಂತ್ರವನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ವಿರೋಧಿಸುತ್ತದೆ. ಜನ ವಿರೋಧಿ ನೀತಿಗಳ ವಿರುದ್ಧ ನಮ್ಮ ಈ ಹೋರಾಟ ಕೇವಲ ಸಾಲಿಗ್ರಾಮಕ್ಕೆ ಸೀಮಿತವಾಗಿಲ್ಲ, ರಾಜ್ಯಾದ್ಯಂತ ಉಗ್ರ ರೀತಿಯಲ್ಲಿ ಮುಂದುವರಿಯಲಿದೆ.” ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಇವರು ತಿಳಿಸಿದ್ದಾರೆ.

💥ಮಣಿಪಾಲದಲ್ಲಿ ನಡೆಯಲಿರುವ ಜಿಲ್ಲಾ ಆಡಳಿತ ಮುತ್ತಿಗೆ ರ್ಯಾಲಿಯು ಭಾರಿ ಕುತೂಹಲ ಮೂಡಿಸಿದ್ದು, ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button