ಸಕಲ ಬ್ರಹ್ಮಾಂಡದ ಸೃಷ್ಟಿಗೆ ಜಗನ್ಮಾತೆ ಕಾರಣ – ಯತೀಶ್ ಎಂ ಸಿದ್ದಾಪುರ.
ಚಳ್ಳಕೆರೆ ನ.07




ಸಕಲ ಬ್ರಹ್ಮಾಂಡವನು ಬಸಿರಲಿ ಧರಿಸಿ ನಿತ್ಯವು ಪೊರೆವವಳು ತಾಯಿ ಜಗನ್ಮಾತೆ ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಸದಸ್ಯ ಹಾಗೂ ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು.
ತ್ಯಾಗರಾಜ ನಗರದ ಸದ್ಭಕ್ತರಾದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಶ್ರೀಮಾತೆ-ಶ್ರೀರಾಮಕೃಷ್ಣ ರೂಪವೆರಡು” ಶಕ್ತಿಯೊಂದು ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹೆಚ್ ಲಕ್ಷ್ಮೀದೇವಮ್ಮ, ಎಂ ಲಕ್ಷ್ಮೀದೇವಮ್ಮ, ರಂಗಮ್ಮ, ಪ್ರೇಮಾ, ಎಂ ಗೀತಾ ನಾಗರಾಜ್, ಪುಷ್ಪಲತಾ ವಿಜಯ್, ಶೋಭಾ ರಮೇಶ್, ಗೀತಾ ಪ್ರಕಾಶ್, ಸೌಮ್ಯ ಪ್ರಸಾದ್, ತಿಪ್ಪಮ್ಮ ಉಮಾಶಂಕರ್, ಜಯಮ್ಮ, ದಾಕ್ಷಾಯಣಿ, ರಾಘವೇಂದ್ರ, ಸುವರ್ಣ ನಾಗರಾಜ್ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
