ಚಂದ್ರಗಿರಿಹಟ್ಟಿಯ ಸರ್ಕಾರಿ ಶಾಲಾ ಮಕ್ಕಳಿಗೆ – ಕ್ರೀಡಾ ಸಾಮಗ್ರಿಗಳ ವಿತರಣೆ.
ನನ್ನಿವಾಳ ನ.08




ಚಳ್ಳಕೆರೆ ತಾಲೂಕಿನ ನನ್ನಿವಾಳ ಸಮೀಪದ ಚಂದ್ರಗಿರಿ ಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ 71 ನೇ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ, ವಿದ್ಯಾ ಐತಾಳ್, ಖಜಾಂಚಿ ಡಾ, ಕವಿತಾ ನಾಗೇಶ್, ಸದಸ್ಯರಾದ ನೀನಾ ವಿನಯಕುಮಾರ್, ಸುಜಾತಾ, ಶಾಲೆಯ ಮುಖ್ಯ ಶಿಕ್ಷಕಿ ಡಿ.ಶಬ್ರಿನಾ ಮಹಮದ್ ಅಲಿ, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಪತ್ರಕರ್ತ ಬೆಳಗೆರೆ ಸುರೇಶ್, ಅತಿಥಿ ಶಿಕ್ಷಕಿ ಮೌಲ್ಯ, ಅಡುಗೆ ಸಿಬ್ಬಂದಿ ಮಂಗಳಮ್ಮ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
