ಯೋಗಾಭ್ಯಾಸ ಮತ್ತು ಮಿತಾಹಾರದಿಂದ ಮಧುಮೇಹ ನಿಯಂತ್ರಣ ಸಾಧ್ಯ – ಡಾ, ಸುಧೀರ್ ದೇಶಪಾಂಡೆ.

ಮಾನ್ವಿ ನ.15

ಮಿತಾಹಾರ ಮತ್ತು ನಿತ್ಯ ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು. ನಿಯಮಿತ ಜೀವನಶೈಲಿ ಹಾಗೂ ಯೋಗಾಭ್ಯಾಸದಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟು ಕೊಳ್ಳಲು ಸಾಧ್ಯ ಎಂದು ಕೆಪಿಎಸ್ ವಿ.ಎಸ್. ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ, ಸುಧೀರ್ ದೇಶಪಾಂಡೆ ಹೇಳಿದರು.

ಪಟ್ಟಣದ ಕೆಪಿಎಸ್ ವಿ.ಎಸ್. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗದ ವತಿಯಿಂದ ನವೆಂಬರ್ 14, 2026 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿದ್ದ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ನಿತ್ಯ ಜೀವನದಲ್ಲಿ ಮಿತಾಹಾರಕ್ಕೆ ಆದ್ಯತೆ ನೀಡುವುದರ ಜೊತೆಗೆ ಯೋಗಾಭ್ಯಾಸ ಮತ್ತು ದೈಹಿಕ ಶ್ರಮವನ್ನು ರೂಢಿಸಿ ಕೊಳ್ಳಬೇಕು. ಇದರಿಂದ ಆರೋಗ್ಯವನ್ನು ಕಾಪಾಡಿ ಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಕಾಲೇಜಿನ ಯೋಗ ಗುರು ಅನ್ನದಾನಯ್ಯ ಮಾತನಾಡಿ, ಯೋಗಾಸನಗಳು ವೈಜ್ಞಾನಿಕ ಸಂಶೋಧನೆಗಳಿಂದ ಕೂಡಿದ್ದು, ಪ್ರತಿಯೊಬ್ಬರೂ ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿ ಕೊಂಡಾಗ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಹೇಳಿದರು.

ನಂತರ ಕಾಲೇಜಿನ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ವಿಭಾಗದ ವೈದ್ಯರಾದ ಡಾ, ಅರ್ಪಿತ ಅವರು ಮಧುಮೇಹ ನಿಯಂತ್ರಣದಲ್ಲಿ ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಭುಜಂಗಾಸನ, ಪಕ್ರಾಸನ, ಅರ್ಧ ಮತ್ಸ್ಯೇಂದ್ರಾಸನ, ಸೇತುಬಂಧಾಸನ ಹಾಗೂ ಅರ್ಧ ಚಕ್ರಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ಪ್ರಾತ್ಯಕ್ಷಿಕೆ ಮೂಲಕ ಹೇಳಿ ಕೊಟ್ಟರು. ಜೊತೆಗೆ ಪ್ರಾಣಾಯಾಮ ಮತ್ತು ಯೋಗ ನಿದ್ರೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿಗಳಾದ ಉಮಾಶಂಕರ ಮತ್ತು ಜೀವನೇಶ್ವರಯ್ಯ, ಉಪನ್ಯಾಸಕರಾದ ಡಾ, ಪ್ರಿಯಾಂಕ, ವಿವಿಧ ವಿಭಾಗಗಳ ಮುಖ್ಯಸ್ಥರು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಎಲ್ಲಾರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button