ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ – ಪತ್ರಕರ್ತ ಭೀರಪ್ಪ ಹೊಸೂರ ಆಯ್ಕೆ.
ಇಂಡಿ ನ.24




ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ, ಕನ್ನಡ ಭಾಷೆಯ ಮೇಲಿನ ಅಭಿಮಾನ ಹಾಗೂ ಸಮಾಜ ಮುಖಿ ಕಾರ್ಯಗಳನ್ನು ಗುರುತಿಸಿ ಇಂಡಿ ತಾಲೂಕಿನ ಪತ್ರಕರ್ತ ಭೀರಪ್ಪ ಸಿದ್ರಾಮ ಹೊಸೂರ ಅವರಿಗೆ 2026 ನೇ. ಸಾಲಿನ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಭುವನೇಶ್ವರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಭೀರಪ್ಪ ಹೊಸೂರ ಅವರು ಕರುನಾಡು ಕೋಗಿಲೆ ಕನ್ನಡ ದಿನಪತ್ರಿಕೆಯ ಸಂಪಾದಕರಾಗಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪತ್ರಿಕಾ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಅವರು, ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ತಮ್ಮ ಬರವಣಿಗೆಯ ಮೂಲಕ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವುದರ ಜೊತೆಗೆ ಜನಸಾಮಾನ್ಯರ ಧ್ವನಿಯಾಗಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಾಧನೆಯನ್ನು ಗುರುತಿಸಿ ಭುವನೇಶ್ವರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯು ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಪತ್ರಿಕಾ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.
ನವೆಂಬರ್ 27 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಚಂದ್ರಭವನದಲ್ಲಿ ನಡೆಯಲಿರುವ ಅದ್ದೂರಿ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಭೀರಪ್ಪ ಹೊಸೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಅಧ್ಯಕ್ಷರಾದ ಪ್ರತಿಭಾ ಪಾಟೀಲ ತಿಳಿಸಿದ್ದಾರೆ.
ಪತ್ರಕರ್ತ ಭೀರಪ್ಪ ಹೊಸೂರ ಅವರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಪತ್ರಕರ್ತರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.
