ಗ್ರಾಮದಲ್ಲಿ ಮೂವರು ಸಾಧಕರಿಗೆ – ಆತ್ಮೀಯ ಸನ್ಮಾನದ ಗೌರವ.

ಬ್ಯಾಡಗಿಹಾಳ ನ.26

ಆಲಮೇಲ ತಾಲೂಕಿನ ಬ್ಯಾಡಗಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ದಿನಾಂಕ 25-11-2026 ರಂದು ಸಂಜೆ 6 ಗಂಟೆಗೆ ಗ್ರಾಮದ ವತಿಯಿಂದ ಸಾಧಕರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಕಂಪನಿಯ ನಿರ್ದೇಶಕರಾಗಿ ಆಯ್ಕೆಯಾದ ಪರಶುರಾಮ ಕಾಂಬಳೆ, ದಿವಂಗತ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಜನ್ಮದಿನೋತ್ಸವದ ಅಂಗವಾಗಿ ಪತ್ರಿಕೋದ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ಗೌರವಕ್ಕೆ ಭಾಜನರಾದ ದೇವಣಗಾಂವ ಗ್ರಾಮದ ಪತ್ರಕರ್ತ ಗಾಲಿಬಸಾಹೇಬ ನಾಗಾವಿ ಹಾಗೂ ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕರಾದ ಮಾಣಿಕ ಕಲಬಾ ಅವರನ್ನು ಗ್ರಾಮದ ವತಿಯಿಂದ ಆತ್ಮೀಯವಾಗಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ಸ್ಯಾಂಡಲ್ ಸೋಪ್ ಕಂಪನಿಯ ನಿರ್ದೇಶಕ ಪರಶುರಾಮ ಕಾಂಬಳೆ ಅವರು, ನಾನು ಇದೇ ಬ್ಯಾಡಗಿಹಾಳ ಗ್ರಾಮದವನು. ಅತ್ಯಂತ ಬಡ ಕುಟುಂಬದಲ್ಲಿ ಹಾಗೂ ದಲಿತ ಸಮುದಾಯದಲ್ಲಿ ಜನಿಸಿದ ನಾನು ಇಂದು ಈ ಮಟ್ಟಕ್ಕೆ ಬರಲು ಕಾಂಗ್ರೆಸ್ ಪಕ್ಷ ನನ್ನನ್ನು ಬೆಳೆಸಿದೆ ಎಂದು ಆತ್ಮ ಸಂತೋಷ ಪೂರಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button