ನಕಲಿ ಕ್ಲೀನಿಕ್‌ಗಳ ಮೇಲೆ ದಾಳಿ ಮೂರು ಕೇಂದ್ರಗಳು ಸೀಜ್ – ಕಾನೂನು ಕ್ರಮದ ಎಚ್ಚರಿಕೆ.

ಪೋತ್ನಾಳ ಏ.04

ಮಾನ್ವಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಭೀಮರಾಯ.ಬಿ ರಾಮಸಮುದ್ರ ನೇತೃತ್ವದಲ್ಲಿ ನಕಲಿ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದೊಂದಿಗೆ ಆಟವಾಡುತ್ತಿರುವ ನಕಲಿ ವೈದ್ಯರ ವಿರುದ್ಧ ಈ ದಾಳಿ ನಡೆಸಲಾಗಿದ್ದು, ಯಾವುದೇ ಮಾನ್ಯತೆ ಇಲ್ಲದೆ ಕ್ಲೀನಿಕ್ ನಡೆಸುವವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಒಂದು ಹಾಗೂ ಪೋತ್ನಾಳ್ ಗ್ರಾಮದಲ್ಲಿ ಎರಡು ನಕಲಿ ಕ್ಲೀನಿಕ್‌ಗಳನ್ನು ಪತ್ತೆಹಚ್ಚಿ, ವೈದ್ಯಕೀಯ ನೊಂದಣಿ ಹಾಗೂ ಪದವಿ ಇಲ್ಲದೆ ಚಿಕಿತ್ಸೆ ನೀಡುತ್ತಿರುವುದು ದೃಢಪಟ್ಟ ಹಿನ್ನೆಲೆ, ತಕ್ಷಣವೇ ಕ್ಲೀನಿಕ್‌ಗಳನ್ನು ಸೀಜ್ ಮಾಡಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಇಂತಹ ನಕಲಿ ವೈದ್ಯರಿಂದ ದೂರವಿರ ಬೇಕು ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ದಾಳಿಯಲ್ಲಿ ಜಿಲ್ಲಾ ಅಯುಷ್ ಅಧಿಕಾರಿ ಡಾ, ಶಂಕರಗೌಡ, ಜಿಲ್ಲಾ ಮಲೇರಿಯ ಅಧಿಕಾರಿ ಡಾ, ಚಂದ್ರಶೇಖರಯ್ಯಸ್ವಾಮಿ, ತಾ. ಆರೋಗ್ಯಾಧಿಕಾರಿ ಡಾ, ಶರಣಬಸವರಾಜು, ಪಿ.ಐ. ಸೋಮಶೇಖರ ಎಸ್. ಕೆಂಚರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button