ಮೊಳಕಾಲ್ಮುರು ಪಟ್ಟಣದಲ್ಲಿ ನೀರು ಸರಬರಾಜು ವ್ಯವಸ್ಥೆ ಯೋಜನೆ – ಕಲ್ಪಿಸಿದಂತ ಶಾಸಕರು.
ಮೊಳಕಾಲ್ಮುರು ಫೆ.15

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ₹ 34. ಕೋಟಿ 81 ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ.ಇಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೊಳಕಾಲ್ಮೂರು ಪಟ್ಟಣದಲ್ಲಿ ಕೇಂದ್ರ ಪುರಸ್ಕೃತ ಅಮೃತ 2.0 ಅಡಿಯಲ್ಲಿ ಪಟ್ಟಣಕ್ಕೆ ಸುಧಾರಿಸಿದ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಯೋಜನೆ ಸುಮಾರು ₹ 16.46 ಕೋಟಿ ಹಾಗೂ ನಾಯಕನಹಟ್ಟಿ ಪಟ್ಟಣದಲ್ಲಿಕೇಂದ್ರ ಪುರಸ್ಕೃತ ಅಮೃತ 2.0 ಅಡಿಯಲ್ಲಿ ಪಟ್ಟಣಕ್ಕೆ ಸುಧಾರಿಸಿದ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಯೋಜನೆ ₹ 16.46 ಕೋಟಿ ಹಾಗೂ ವಾರ್ಡ್ ಗಳಲ್ಲಿ ₹ 1.89 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಸಂಸದರಾದ ಗೋವಿಂದ ಕಾರಜೋಳ ವಿಧಾನ ಪರಿಷತ್ ನವೀನ್, ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರುಗಳು, ಅಭಿಮಾನಿಗಳು ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು