ನೆಲ್ಲಿಬೆಟ್ಟು ಗ್ರಾಮದ ಹೆಮ್ಮೆಯ ಮಗ, ರಾಜೇಶ್.ಕೆ ನೆಲ್ಲಿಬೆಟ್ಟು ಅವರಿಗೆ – ವಿಶೇಷ ಗೌರವ.
ಉಡುಪಿ ಸ.03





ಕಾರ್ಕಡ ಗ್ರಾಮದ ನೆಲ್ಲಿಬೆಟ್ಟು ಗಣೇಶೋತ್ಸವ ಸಮಿತಿಯು, ಸಮಾಜ ಸೇವಾ ಕಾರ್ಯಗಳಲ್ಲಿ ಸದಾ ಮುಂಚೂಣಿ ಯಲ್ಲಿರುವ ರಾಜೇಶ್.ಕೆ ನೆಲ್ಲಿಬೆಟ್ಟು ಅವರನ್ನು ಸನ್ಮಾನಿಸಿ ಗೌರವಿಸಿದೆ. ಕರ್ನಾಟಕ ಸರ್ಕಾರದ ಭೂ ಕಂದಾಯ ಇಲಾಖೆಯ ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ತಮ್ಮ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ರಾಜೇಶ್ ಅವರು ಮಾಡಿದ ನಿಸ್ವಾರ್ಥ ಸೇವೆಗಾಗಿ ಈ ಅಭಿನಂದನೆ ಸಲ್ಲಿಸಲಾಯಿತು.

ಸಮಾಜ ಮುಖಿ ಕಾರ್ಯಗಳ ಮೂಲಕ ಗಮನ ಸೆಳೆದ ರಾಜೇಶ್, ರಾಜೇಶ್.ಕೆ ನೆಲ್ಲಿಬೆಟ್ಟು ಅವರು ಕೇವಲ ರಾಜಕೀಯ ಕಾರ್ಯಗಳಿಗಷ್ಟೇ ಸೀಮಿತವಾಗಿಲ್ಲ. ಅವರು ತಮ್ಮ ಗ್ರಾಮದ ಅಭಿವೃದ್ಧಿ ಮತ್ತು ಸಮಾಜದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ ಹಲವಾರು ಬಡ ಕುಟುಂಬಗಳಿಗೆ ನ್ಯಾಯ ಒದಗಿಸಿದ್ದಾರೆ. ನಿರ್ಗತಿಕರು, ಬಡವರು ಮತ್ತು ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಅವರ ಸಮಾಜ ಮುಖಿ ಗುಣಗಳಿಂದಾಗಿ, ಅವರು ಗ್ರಾಮದಲ್ಲಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.
ಗಣೇಶೋತ್ಸವ ಸಮಿತಿಯಿಂದ ಗೌರವದ ಸನ್ಮಾನ
ನೆಲ್ಲಿಬೆಟ್ಟು ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮದ ಹಿರಿಯರು ಈ ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಮಿತಿಯ ಅಧ್ಯಕ್ಷರು ಮಾತನಾಡಿ, “ರಾಜೇಶ್ ನೆಲ್ಲಿಬೆಟ್ಟು ನಮ್ಮ ಗ್ರಾಮದ ಹೆಮ್ಮೆಯ ಮಗ. ಅವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅವರ ಸೇವಾ ಮನೋಭಾವ ನಮಗೆಲ್ಲರಿಗೂ ಪ್ರೇರಣೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜೇಶ್ ಅವರು, “ಗ್ರಾಮದ ಜನರ ಈ ಗೌರವ ನನಗೆ ಇನ್ನಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಕೂಡ ಗ್ರಾಮದ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳಿಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ” ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಲವಾರು ಪ್ರಮುಖರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದು, ಅವರಿಗೆ ಶುಭ ಹಾರೈಸಿದರು.
ವರದಿ:ಆರತಿ.ಗಿಳಿಯಾರು.ಉಡುಪಿ