ಶ್ರೀ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸೊನ್ನಮರಡಿ.
ಹುಲಿಕೆರೆ ಜನೇವರಿ.3

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಹೊರವಲಯ ದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮಂಗಳವಾರ ಸಂಜೆ ಜರಗಿತು.ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತರು ದೇವಸ್ಥಾನದ ಆವರಣದಲ್ಲಿ ದೀಪಗಳಿಗೆ ಎಣ್ಣೆ .ಬತ್ತಿ .ಹಾಕಿ ದೀಪ ಹಚ್ಚಿ ಭಕ್ತಿ ಸಮರ್ಪಿಸಿದರು.ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಗೋಪುರಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದಾರೆ.ದೇವಸ್ಥಾನದ ಆವರಣದಲ್ಲಿ ಎಣ್ಣೆ ಬತ್ತಿ ದೀಪಗಳು ಕಂಗೊಳಿಸುತ್ತಿದ್ದವು. ಕಾರ್ತಿಕೋತ್ಸವದಲ್ಲಿ ಗ್ರಾಮಸ್ಥರು ಸೇರಿ ಸುತ್ತ ಮುತ್ತಲ ಗ್ರಾಮಸ್ಥರು ಸಹ ಪಾಲ್ಗೊಂಡಿದ್ದರು ದೀಪಹಚ್ಚಿ ಭಕ್ತಿ ಸಮರ್ಪಿಸಿದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ