ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮಕ್ಕೆ ಚಾಲನೆ.
ಪೂಜಾರಹಳ್ಳಿ ಜನೇವರಿ.18

ಸಮೀಪದ ಪೂಜಾರಹಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕುರಿತ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ದೇವೇಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳು ನಿಮ್ಮ ಬಾಗಿಲಿಗೆ ಬರುತ್ತಿವೆ ದೇಶದ ಸುಮಾರು 81 ಕೋಟಿ ಜನರು ಕೇಂದ್ರ ಸರ್ಕಾರದ ವಿವಿಧ ರೀತಿಯ ಫಲಾನುಭವಿಗಳಿದ್ದಾರೆ. ಇದರಲ್ಲಿ ಮಹಿಳೆಯರು ರೈತರು ಬಡವರು ದುರ್ಬಲ ವರ್ಗದವರು ಸೇರಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳಾಗಿವೆ, ಜನಧನ್ ಯೋಜನೆ, ಕಿಸಾನ್, ಅಟಲ್ ಪೆನ್ಷನ್, ಮುದ್ರಾ ಯೋಜನೆ, ಇನ್ಸೂರೆನ್ಸ್ ಯೋಜನೆಗಳಾದ ಪಿಎಂಜೆಜೆ ಬಗ್ಗೆ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೇಶದ ವಿವಿಧ ರಾಜ್ಯಗಳ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆಗಿನ ನೇರ ಸಂವಾದವನ್ನು ವೀಕ್ಷಿಸಿದರು. ಬಳಿಕ ಫಸಲ್ ಬೀಮಾ ಯೋಜನೆಯ ಚೆಕ್ ಹಾಗೂ ಗ್ಯಾಸ್ ಸಿಲಿಂಡರ್ ವಿತರಿಸಿದರು. ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಲಕೃಷ್ಣ ನಬಾರ್ಡ್, ಯುವರಾಜ್, ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಕುಮಾರ್ ದ್ರೋಣ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾರಾಯಣಪ್ಪ, ಮಾಜಿ ಅಧ್ಯಕ್ಷರಾದ ಶಿಲ್ಪ ಬಸಪ್ಪ, ಹಾಲಿ ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ಬಿಜೆಪಿ ಮುಖಂಡರು, ಆರೋಗ್ಯ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ