ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೆ ಶಾಸಕ ಎನ್.ವೈ.ಜೀ – ಸಂತಸ ವ್ಯಕ್ತಪಡಿಸಿದ್ದಾರೆ.
ಮೊಳಕಾಲ್ಮುರು ಆ.09





ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಗಣಿ ಬಾದಿತ ಹಾಗೂ ಅತ್ಯಂತ ಹಿಂದುಳಿದ ಪ್ರದೇಶ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತುತ 100 ಹಾಸಿಗೆ ತಾಲೂಕ ಆಸ್ಪತ್ರೆಯನ್ನು 200 ಹಾಸಿಗೆ ಉನ್ನತೀಕರಿಸಿ ಪ್ರತ್ಯೇಕ ಜಿಲ್ಲಾ ಮಟ್ಟದ ಆಸ್ಪತ್ರೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರಿಗೆ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರಿಗೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಾಲೂಕಿನ ಮತದಾರರು ಸಂತೋಷ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಶಾಸಕರಿಗೆ ಗೌರವ ಸಿಕ್ಕ ಹಾಗೆ ತಾಲೂಕಿನ ಎಲ್ಲಾ ನಾಗರಿಕರಿಗೆ ಅನುಕೂಲ ವಾಗಬೇಕೆಂದು ಎನ್.ವೈ ಗೋಪಾಲಕೃಷ್ಣ ಶಾಸಕರು ಮೊಳಕಾಲ್ಮೂರು ಕ್ಷೇತ್ರಕ್ಕೆ ಸುಮಾರು 550 ಕೋಟಿ ಅನುದಾನವನ್ನು ತಂದು ತಾಲೂಕಿನ ಎಲ್ಲಾ ಗ್ರಾಮಗಳಿಗೆ ಸರ್ಕಾರದ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ. ಅಭಿವೃದ್ಧಿ ಹರಿಕಾರರು ಏಳು ಬಾರಿ ಶಾಸಕರು ಆಗಿದ್ದಾರೆ. ಏಳು ಲಕ್ಷ ಮತದಾರರನ್ನು ಸಹ ಮನಸ್ಸು ಗೆದ್ದಿದ್ದಾರೆ. ಒಂದೇ ಗುರಿ ಇರುವಂತೆ ಶಾಸಕರು ಎನ್.ವೈ ಗೋಪಾಲಕೃಷ್ಣ ದೊಡ್ಡ ಮನಸ್ಸು ಮಾಡಿದ್ದಾರೆ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮೂರು